ಬೆಂಗಳೂರು: ಬಿಜೆಪಿ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದ ಕಾರ್ಯಕರ್ತೆಯನ್ನು ಬಂಧಿಸಿ, ಎಫ್‌ಐಆರ್ ದಾಖಲಿಸುವ ಬೆದರಿಕೆ ಒಡ್ಡಿರುವ ಪೊಲೀಸರ ನಡೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಬಿಜೆಪಿ ಸದಸ್ಯತ್ವ ನೋಂದಣಿಗೆಂದು ಬಂದಿದ್ದ ಹೆಣ್ಣುಮಗಳನ್ನು ಏಕಾಏಕಿ ಬಂಧಿಸಿ ಮಧ್ಯರಾತ್ರಿವರೆಗೂ ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದಾರೆ. ವಿಷಯ ತಿಳಿದು ನಮ್ಮ ಕಾರ್ಯಕರ್ತರು ಪೊಲೀಸ್ ಠಾಣೆಗೆ ಹೋಗಿ ಕೇಳಿದರೆ ಒಟಿಪಿ ಡೌನ್ ಲೋಡ್ ಮಾಡುತ್ತಿದ್ದರು ಹಾಗೆ ಹೀಗೆ ಎಂದು ಇಲ್ಲ ಸಲ್ಲದ ಸುಳ್ಳು ಹೇಳುತ್ತಿದ್ದಾರೆ. ಪೊಲೀಸರ ಇಂತಹ ನಡೆ ಖಂಡನೀಯ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪೊಲೀಸರು ಕಾಂಗ್ರೆಸ್ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ. ಪದೇ ಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಗುಡುಗಿದರು.
ಇದೇ ರೀತಿಯ ಘಟನೆಗಳು ಮುಂದುವರೆದಲ್ಲಿ ನಾವು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ. ಪೊಲೀಸ್ ಅಧಿಕಾರಿಗಳು ಪದೇ ಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುವುದು, ಎಫ್ಐಆರ್ ದಾಖಲಿಸುವ ಕೆಲಸ ಮಾಡಿದರೆ ನಾವು ಹೋರಾಟ ನಡೆಸಬೇಕಾಗುತ್ತೆ ಎಂದು ಎಚ್ಚರಿಸಿದ್ದಾರೆ.