ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿರುವ ಬಿಜೆಪಿ ನಾಯಕರು, ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹಯೆ ಕೇಸ್ ಗೆ ಸಂಬಂಧಿಸಿದಂತೆ ನಾವು ಅವರ ಕುಟುಂಬದವರನ್ನು ಭೇಟಿಯಾಗಿದ್ದೇವೆ. ಅವರ ಸಹೋದರಿಯರು ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಸಚಿನ್ ಡೆತ್ ನೋಟ್ ಪತ್ತೆಯಾಗುತ್ತಿದ್ದಂತೆ ಪೊಲೀಸ್ ಠಾಣೆಗೆ ತೆರಳಿ ಸಹೋದರನ ಪ್ರಾಣ ಉಳಿಸುವಂತೆ ಮನವಿ ಮಾಡಿದೆವು. ಆದರೆ ಪಿಎಸ್ ಐ, ಇತರೆ ಅಧಿಕರಿಗಳು ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಪೊಲೀಸರು ದೂರು ಸ್ವೀಕರಿಸಿಲ್ಲ. ರಾಜು ಕಪನೂರ್ ಖರ್ಗೆ ಕುಟುಂಬದ ಆಪ್ತ ಎಂದು ಉಲ್ಲೇಖಿಸಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಕಣ್ಣೀರಿಟ್ಟಿದ್ದಾರೆ ಎಂದರು.
ಪ್ರಿಯಾಂಕ್ ಖರ್ಗೆ ಕೇವಲ ಗ್ರಾಮೀಣಾಭಿವೃದ್ಧಿ ಸಚಿವ ಮಾತ್ರವಲ್ಲ ಸರ್ವ ಇಲಾಖೆಗಳ ಸಚಿವ, ಎಲ್ಲಾ ಇಲಾಖೆಗಳಿಗೂ ಇವರೇ ಮೇಟಿ. ಸದನದಲ್ಲಿ ಸಿಎಂ ಹಾಗೂ ಗೃಹ ಸಚಿವರು ಇದ್ದರೂ ಇವರೇ ಮಾತನಾಡುತ್ತಾರೆ ಎಂದು ವಾಗ್ದಾಅಳಿ ನಡೆಸಿದರು.
ಯಡಿಯೂರಪ್ಪ ಪೋಕ್ಸೋ ಕೇಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಮಾತನಾಡುತ್ತಾರೆ. ಯಡಿಯೂರಪ್ಪನವರ ಕೇಸ್ ಬಗ್ಗೆ ನೀವೇನು ಮಾತನಾಡುವುದು? ಎಂದು ಪ್ರಶ್ನಿಸಿದರು.