
ಬೆಂಗಳೂರು: ರಾಜ್ಯದಲ್ಲಿ ತೀವ್ರವಾದ ಬರಗಾಲವಿದ್ದು, ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೋಮವಾರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಆರಂಭವಾಗಿದೆ. ಬರ ನಿರ್ವಹಣೆಗೆ ಪೂರ್ವ ತಯಾರಿ ಮಾಡದೇ ಕೇಂದ್ರ ಸರ್ಕಾರದ ವಿರುದ್ಧ ಸುಮ್ಮನೇ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಆದೇಶಕ್ಕೂ ಮುನ್ನ ತಮಿಳುನಾಡಿಗೆ ನೀರು ಬಿಟ್ಟವರು ಇವರು. ಇದರಿಂದಾಗಿ ಬೆಂಗಳೂರಿಗೆ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ರಾಜ್ಯದಲ್ಲಿ ಬರದಿಂದಾಗಿ ರೈತರು, ಜನರು ಸಂಕಷ್ಟಕ್ಕೀಡಾಗಿದ್ದಾರೆ. ಬರ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲ್ಲಿದೆ ಎಂದು ತಿಳಿದಿದರು.