
ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲ ಥಾವರ್ ಚ್ಂದ್ ಗೆಹ್ಲೋಟ್ ಭಾಷ್ನ ಮಾಡಿದ್ದಾರೆ. ರಾಜ್ಯಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯಪಾಲರ ಸಮಯವನ್ನು ಕೂಡ ಸರ್ಕಾರ ವ್ಯರ್ಥ ಮಾಡುತ್ತಿದೆ. ರಾಜ್ಯದ ಅಭಿವೃದ್ಧಿ ವಿಚಾರವಾಗಿ ಸರ್ಕಾರ ಚಕಾರವೆತ್ತಿಲ್ಲ ಕ್ರಮ ಕೈಗೊಂಡ ಬಗ್ಗೆ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಕೂದ ನಟ್ಟು, ಬೋಲ್ಟು ಸಡಿಲಾಗಿದೆ ಎಂದು ಹೇಳಿದರು.
ಘನವೆತ್ತ ರಾಜ್ಯಪಾಲರಿಂದ ರಾಜ್ಯ ಸರ್ಕಾರ ಹಸಿಸುಳ್ಳುಗಳನ್ನು ಹೇಳಿಸಿದೆ. ಸರ್ಕಾರದ ನಡೆ ಸರಿಯಲ್ಲ ಎಂದು ಕಿಡಿಕಾರಿದರು.