
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸ್ಪಷ್ಟ. ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಬಣ ಬಡಿದಾಟ ಆರಂಭವಾಗಿದೆ. ಕೆಲ ನಾಯಕರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಬೇಕು ಎಂದು ಹೇಳಿಕೆ ಕೊಡುತ್ತಿದ್ದಾರೆ. ಇನ್ನು ಕೆಲವರು ಸಿಎಂ ಹುದ್ದೆ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ತೀವ್ರಗೊಂಡಿದೆ ಎಂದು ಹೇಳಿದರು.
ಕಾಂಗೆಸ್ ನಾಯಕರಲ್ಲಿಯೇ ಭಿನ್ನಮತ ಆರಂಭವಾಗಿದೆ. ಒಂದು ಬಣ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಬಡಿದಾಡುತ್ತಿದೆ. ಇನ್ನೊಂದು ಬಣ ಸಿಎಂ ಹುದ್ದೆ ಬದಲಾವಣೆಗಾಗಿ ಪ್ರಯತ್ನಿಸುತ್ತಿದೆ. ಒಟ್ಟಾರೆ ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ಜೋರಾಗಿದ್ದು, ಕ್ಷಿಪ್ರ ರಾಜಕೀಯ ಬೆಳವಣಿಗೆಯಾಗಲಿದೆ ಎಂದು ಹೇಳಿದರು.