ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಳಿಕ ಇದೀಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನೂ ಬಿಜೆಪಿಗೆ ವಾಪಾಸ್ ಕರೆತಲು ಯತ್ನಗಳು ನಡೆಯುತ್ತಿವೆ ಎಂಬ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆದಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ.
ಲಕ್ಷ್ಮಣ ಸವದಿ ಬಿಜೆಪಿಗೆ ಮರು ಸೇರ್ಪಡೆಯಾಗಲಿದ್ದಾರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಬಿ.ವೈ.ವಿಜಯೇಂದ್ರ, ಸವದಿಯವರು ದೈಹಿಕವಾಗಿ ಕಾಂಗ್ರೆಸ್ ನಲ್ಲಿದ್ದರೂ ಕೂಡ ಮಾನಸಿಕವಾಗಿ ಬಿಜೆಪಿಯಲ್ಲಿದ್ದಾರೆ ಎಂದು ಹೇಳಿದ್ದಾರೆ.
ಲಕ್ಷ್ಮಣ ಸವದಿಯವರು ಇಂದು ಕಾಂಗ್ರೆಸ್ ನಲ್ಲಿರಬಹುದು ಆದರೆ ಅವರ ಮನಸ್ಸಿನಲ್ಲಿ ಬಿಜೆಪಿ ಇದೆ. ಮಾನಸಿಕವಾಗಿ ಅವರು ಬಿಜೆಪಿಯಲ್ಲಿದ್ದಾರೆ. ಮುಂದೆ ಏನಾಗಲಿದೆ ಎಂಬುದನ್ನು ಕಾಲವೇ ನಿರ್ಣಯಿಸಲಿದೆ ಎಂದು ಹಾಳಿದ್ದಾರೆ.