ಬೆಂಗಳೂರು: ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೇರಿದೆ. ಶಾಸಕ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನನ್ನ ಬಗ್ಗೆ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಅವರಿಗೆ ದೊಡ್ಡ ಪದವಿ ಸಿಗಲಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ನಮ್ಮ ಪಕ್ಷದ ಕೆಲ ಮುಖಂಡರು ಯತ್ನಾಳ್ ರಿಂದ ಈ ಕೆಲಸ ಮಾಡಿಸುತ್ತಿದ್ದಾರೆ. ಯತ್ನಳ್ ಹೆಗಲಮೇಲೆ ಬಂದೂಕು ಇಟ್ಟು ಗುಂಡು ಹಾರಿಸುವ ಕೆಲಸಗಳಾಗುತ್ತಿವೆ. ಇಂತಹ ಭಿನ್ನಭಿಪ್ರಾಯಗಳನ್ನು ಬಿಟ್ಟು ಒಗ್ಗಟ್ಟಿನಲ್ಲಿ ಹೋಗಬೇಕು ಎಂಬ ಅರಿವಿರಬೇಕಿತ್ತು ಎಂದು ಟಾಂಗ್ ನೀಡಿದ್ದಾರೆ.
ಉಪಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರು, ರಾಜ್ಯದ ಜನತೆ ನೊಂದಿದ್ದಾರೆ. ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಇಂತಹ ಸಂದರ್ಭದಲ್ಲಿ ಪಕ್ಷದ ಜೊತೆ ಇದ್ದು, ಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುವುದನ್ನು ಬಿಟ್ಟು ಪ್ರತ್ಯೇಕ ಹೋರಾಟದ ಹೆಸರಲ್ಲಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.