BIG NEWS: ನೋವು ಮರೆತು ಪಕ್ಷದೊಂದಿಗೆ ಕೈಜೋಡಿಸಿ; ಮಾಜಿ ಸಚಿವ ಈಶ್ವರಪ್ಪಗೆ ಬಿ.ವೈ.ವಿಜಯೇಂದ್ರ ಮನವಿ

ಶಿವಮೊಗ್ಗ: ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನವೊಲಿಕೆಗೆ ಕೊನೆಕ್ಷಣದ ಪ್ರಯತ್ನ ನಡೆಸಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನೋವು ಮರೆತು ಪಕ್ಷದೊಂದಿದೆ ಕೈ ಜೋಡಿಸಿ ಎಂದು ಈಶ್ವರಪ್ಪಗೆ ಮನವಿ ಮಾಡಿದ್ದಾರೆ.

ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ಕೊಡಿ, ನಿಮ್ಮನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ. ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ ಎಂದು ಕೇಳಿಕೊಂಡಿದ್ದಾರೆ.

ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕುಇ ಎಂಬುದು ನಮ್ಮೆಲ್ಲರ ಆಶಯ. ಈಶ್ವರಪ್ಪ ಅವರು ಬೆಂಬಲ ನೀಡಿ ಬಿ.ವೈ.ರಾಘವೇಂದ್ರನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಈಶ್ವರಪ್ಪನವರದ್ದು ಏನೇ ಇರಲಿ ವರಿಷ್ಠರು ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡುತ್ತಾರೆ. ನಾನು ವೈಯಕ್ತಿಕವಾಗಿ ಅವರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ ಎಂದಿದ್ದರು. ಇದೀಗ ಸ್ವತಃ ಬಿ.ವೈ.ವಿಜಯೇಂದ್ರ ಏನೇ ನೋವುಗಳಿದ್ದರೂ ಅದನ್ನು ಮರೆತು ಬಿಜೆಪಿ ಜೊತೆ ಕೈ ಜೋಡಿಸಿ ಬಿ.ವೈ.ರಾಘವೇಂದ್ರನನ್ನು ಗೆಲ್ಲಿಸುವಂತೆ ಈಶ್ವರಪ್ಪನವರನ್ನು ಕೇಳಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read