ಬೆಂಗಳೂರು: ಜಾತಿಗಣತಿ ಅವೈಜ್ಞಾನಿಕವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ. ಈಗ ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿರುವಾಗ ಎಮೋಷ್ನಲ್ ಕಾರ್ಡ್ ಪ್ಲೇ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಜಾತಿಗಣತಿ ವರದಿ ಬಗ್ಗೆ ಈ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದರು. ಹಲವು ಕಾಂಗ್ರೆಸ್ ನಾಯಕರೇ ಇದು ಅವೈಜ್ಞಾನಿಕವಾಗಿದೆ ಎಂದಿದ್ದರು. ಆದರೆ ತಮ್ಮ ಸಿಎಂ ಕುರ್ಚಿಗೆ ಕುತ್ತು ಬಂದಾಗ ಸಿದ್ದರಾಮಯ್ಯನವರು ವರದಿ ಜಾರಿಗೊಳಿಸುವ ಭಾವನಾತ್ಮಕ ನಡೆ ಅನುಸರಿಸುತ್ತಿದ್ದಾರೆ ಎಂದರು.
ಕಾಂಗ್ರೆಸ್ ಸಚಿವರು ತಮ್ಮ ಹೈಕಮಾಂಡ್ ಭೇಟಿಯಾಗುತ್ತಿದ್ದಾರೆ. ಡಿಕೆಶಿ ಅವರೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ. ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದಾಗ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಮಯ ಸನ್ನಿಹಿತವಾಗುತ್ತಿದೆ ಎಂದು ಟಾಂಗ್ ನೀಡಿದರು.