ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಹಿಂದೂ ವಿರೋಧಿ ಸರ್ಕಾರ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಅಭಿವೃದ್ಧಿ ಶೂನ್ಯ ಸರ್ಕಾರ, ಭ್ರಷ್ಟ ಮುಖ್ಯಮಂತ್ರಿ ವಿರುದ್ಧ ಶೀಘ್ರದಲ್ಲೇ ರಾಷ್ಟ್ರಪತಿಗಳ ಭೇಟಿ ಮಾಡಿ ಭ್ರಷ್ಟ ಸರ್ಕಾರವನ್ನು ವಜಾಗೊಳಿಸಲು ಮನವಿ ಮಾಡುತ್ತೇವೆ ಎಂದರು.
ಈ ಸರ್ಕಾರದಿಂದ ರಾಜ್ಯದ ರೈತರಿಗೆ, ಜನರಿಗೆ ಅನುಕೂಲವಾಗುತ್ತಿಲ್ಲ. ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತಾಗಿರುವ ಈ ಜನವಿರೋಧಿ ಸರ್ಕಾರದ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ತಿಳಿಸಿದರು.