ಶಿವಮೊಗ್ಗ : ರಾಜ್ಯದ ಭವಿಷ್ಯದ ಮುಖ್ಯಮಂತ್ರಿ ಬಿ.ವೈ. ವಿಜಯೇಂದ್ರ ಆಗಬೇಕು ಎಂದು ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಸಾಗರದಲ್ಲಿ ನಡೆದ ಶಕ್ತಿ ಸಾಗರ ಸಮಾವೇಶದಲ್ಲಿ ಮಾತನಾಡಿದ ಸ್ವಾಮೀಜಿಗಳು, ರಾಜ್ಯದ ಭವಿಷ್ಯದ ಮುಖ್ಯಮಂತ್ರಿ ವಿಜಯೇಂದ್ರ ಆಗಬೇಕು. ಇದು ಯಡಿಯೂರಪ್ಪ ಆಸೆ ಕೂಡ ಹೌದು, ಬಿ.ಎಸ್. ಯಡಿಯೂರಪ್ಪನವರ ಋಣ ಸಮಾಜ ತೀರಿಸಬೇಕು ಎಂದರು.
ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಆಗುತ್ತಾರೆ. ಮಾಜಿ ಮುಖ್ಯಮಂತ್ರಿ ಮಕ್ಕಳು ಹೇಗೆ ಇರಬೇಕೆಂದು ಅವರನ್ನು ನೋಡಿ ಕಲಿಯಬೇಕು. ಅವರು ಮುಖ್ಯಮಂತ್ರಿ ಆಗಬೇಕು ಎಂಬುದು ನಮ್ಮ ಬಯಕೆಯಾಗಿದೆ ಎಂದು ಹೇಳಿದ್ದಾರೆ.