
ದಾವಣಗೆರೆ: ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ ಬಹಿರಂಗವಾಗಿ ವಾಗ್ದಾಳಿ ನಡೆಸುವ ಮೂಲಕ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ಜಾರಿಯಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಯತ್ನಾಳ್ ಅವರಿಗೆ ನೋಟಿಸ್ ನೀಡಿದ್ದು ನಾನಲ್ಲ. ಕೇಂದ್ರೀಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದೆ. ಅವರೇ ಉತ್ತರಿಸಬೇಕು ಎಂದರು.
ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಬೇಕು ಎಂಬ ಕೆಲವರ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಯತ್ನಾಳ್ ಉಚ್ಛಾಟನೆ ಬಗ್ಗೆ ನಾನೇನೂ ಮಾತನಾಡಲ್ಲ. ಎಲ್ಲರಿಗೂ ಮುಂದೆ ಒಳ್ಳೆಯದಾಗುತ್ತದೆ. ಶೀಘ್ರದಲ್ಲಿಯೇ ಎಲ್ಲವೂ ಬಗೆಹರಿಯಲಿದೆ ಎಂದು ಹೇಳಿದರು.