alex Certify BIG NEWS: ಜಾತಿಗಣತಿ ವರದಿ ಬಗ್ಗೆ ಬಿಜೆಪಿಯಿಂದ ಯಾವುದೇ ವಿರೋಧವಿಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ.ವಿಜಯೇಂದ್ರ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾತಿಗಣತಿ ವರದಿ ಬಗ್ಗೆ ಬಿಜೆಪಿಯಿಂದ ಯಾವುದೇ ವಿರೋಧವಿಲ್ಲ; ಬಿಜೆಪಿ ರಾಜ್ಯಾಧ್ಯಕ್ಷ ಬಿ,ವೈ.ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ಜಾತಿಗಣತಿ ವರದಿ ಬಗ್ಗೆ ಬಿಜೆಪಿಯಿಂದ ಯಾವುದೇ ವಿರೋಧವಿಲ್ಲ. ಜಾತಿಗಣತಿಯನ್ನು ರಾಜಕೀಯ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಜಾತಿಗಣತಿ ಬಗ್ಗೆ ಬಿಜೆಪಿ ನಿಲುವು ಸ್ಪಷ್ಟವಿದೆ. ಕಾಂಗ್ರೆಸ್ ಸರ್ಕಾರದ ಈ ರೀತಿ ನಡೆಯನ್ನು ಒಪ್ಪಲ್ಲ. ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಜಾತಿಗಣತಿ ಪ್ರಕ್ರಿಯೆ ಮುಗಿದಿತ್ತು. ಆದರೆ ಸ್ಪಷ್ಟ ನಿಲುವು ತೆಗೆದುಕೊಳ್ಳಲು ಯಾಕೆ ಸಾಧ್ಯವಾಗಿಲ್ಲ? ಈಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಈಗಾಗಲೇ ತಯಾರಾಗಿರುವ ಕಾಂತರಾಜು ವರದಿ ಬಗ್ಗೆ ಮಾಹಿತಿ ತೆಗೆದುಕೊಂಡಿಲ್ಲ. ಒಳಜಾತಿ ಪಕ್ಕಕ್ಕಿಟ್ಟು ಅವರಿಗೆ ಅನುಕೂಲ ಆಗುವ ವರದಿ ನೀಡಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...