ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೆಂಪಲ್ ರನ್ ಮುಂದುವರೆದಿದ್ದು, ನಾಳೆಯಿಂದ ಮೈಸೂರು ಪ್ರವಾಸ ಕೈಗೊಳ್ಳಲಿದ್ದಾರೆ.
ನಾಳೆಯಿಂದ ಎರಡು ದಿನಗಳ ಕಾಲ ಬಿ.ವೈ.ವಿಜಯೇಂದ್ರ ಮೈಸೂರು ಪ್ರವಾಸ ಕೈಗೊಳ್ಳಲಿದ್ದು, ವಿವಿಧ ದೇವಾಲಯ, ಮಠಗಳಿಗೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟ, ಗಣಪತಿ ಸಚ್ಚಿದಾನಂದ ಆಶ್ರಮ, ಸುತ್ತೂರು ಮಠ, ರಾಮಕೃಷ್ಣ ಆಶ್ರಮ, ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಲಿದ್ದಾರೆ.
ಅಲ್ಲದೆ ಭೈರಪ್ಪ ನಿವಾಸ, ಆರ್.ಎಸ್.ಎಸ್.ಕಚೇರಿ, ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೂ ಭೇಟಿ ಕೊಡಲಿದ್ದು, ಬಳಿಕ ಸೋಮವಾರ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.