ಮೈಸೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೆಂಪಲ್ ರನ್ ಆರಂಭಿಸಿದ್ದು, ಇಂದಿನಿಂದ ಎರಡು ದಿನಗಳ ಕಾಲ ಮೈಸೂರು ಜಿಲ್ಲಾ ಭಾಗದ ದೇವಾಲಯ, ಮಠಗಳಿಗೆ ಭೇಟಿ ನೀಡಲಿದ್ದಾರೆ.
ಇಂದಿನಿಂದ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ವಿಜಯೇಂದ್ರ ಎರಡು ದಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ವಿವಿಧ ದೇವಾಲಯಗಳಿಗೆ, ಮಠಗಳಿಗೆ ಭೇಟಿ ನೀಡಲಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಮೈಸೂರುಗೆ ಭೇಟಿ ನೀಡಲಿರುವ ವಿಜೇಂದ್ರ ಬಳಿಕ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಗಲಿದ್ದಾರೆ. ಬಳಿಕ ಆರ್ ಎಸ್ ಎಸ್ ಕಚೇರಿಗೆ ಭೇಟಿ ಕೊಡಲಿದ್ದಾರೆ. ನಂತರ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಲಿದ್ದಾರೆ.
ಸಂಜೆ 4 ಗಂಟೆಗೆ ನಾಡ ಅದಿದೇವತೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸಂಜೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದು, ಇಂದು ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ನಾಳೆ ಸೋಮವಾರ ಪಕ್ಷ ಸಂಘಟನೆ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.