
ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ನೆರವಾಗುವ ಮೂಲಕ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ) ಮಾನವೀಯತೆ ತೋರಿದ್ದಾರೆ.
ಸಚಿವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನಲ್ಲಿ ಜುಲೈ 12 ರಂದು ಮಧ್ಯಾಹ್ನ ಅತಿವೃಷ್ಟಿಯಿಂದ ಹಾನಿಗೊಳಗಾದ ಬಗ್ಗೆ ಸಭೆ ನಡೆಸಿ ಕಾರ್ಯ ನಿಮಿತ್ತ ಶಿವಮೊಗ್ಗ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.
ಈ ವೇಳೆ ಮೋಟಾರು ಸೈಕಲ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿಗೆ ಎರಡು ನಾಯಿಗಳು ಅಡ್ಡ ಬಂದ ಪರಿಣಾಮ ಅವಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲಿ ಬಿದ್ದಿರುವುದು ನೋಡಿ ಕಾರ್ ನಿಲ್ಲಿಸಿದ್ದಾರೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲು ವಾಹನದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದರು.
ಮಾರುತಿ ಅಮ್ನಿಯಲ್ಲಿ ಪಯಣಿಸುತ್ತಿದ್ದ ಗಂಡ, ಹೆಂಡತಿ ಮತ್ತು ಮಗುವಿಗೆ ತಮ್ಮ ವಾಹನದಲ್ಲಿ ವ್ಯವಸ್ಥೆ ಮಾಡಿ ಅನುಕೂಲ ಮಾಡಿಕೊಟ್ಟಿದ್ದು, ಸಚಿವರ ಸಹಾಯವನ್ನು ಅಲ್ಲಿ ಸೇರಿದ್ದ ಜನ ಸ್ಮರಿಸಿದ್ದಾರೆ.