ಬೆಂಗಳೂರು: ಚಿಕ್ಕಮಗಳೂರು ತಾಲೂಕಿನ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಮೂರು ದಶಕಗಳಿಂದ ವಿವಾದಿತ ಸ್ಥಳವಾಗಿದೆ.
ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಆಡಳಿತ ಮಂಡಳಿ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ. ಒಬ್ಬರು ಮುಸ್ಲಿಂ ಸದಸ್ಯ ಸೇರಿ ಎಂಟು ಜನರ ಆಡಳಿತ ಮಂಡಳಿ ರಚನೆ ಮಾಡಲಾಗಿದೆ. ಅರ್ಚಕರ ನೇಮಕಾತಿ ಬಗ್ಗೆ ನಿರ್ಧರಿಸುವ ಅಧಿಕಾರ ಆಡಳಿತ ಮಂಡಳಿಗೆ ವಹಿಸಲಾಗಿದೆ. ಮೂರು ದಶಕಗಳಿಂದ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದಿತ ಸ್ಥಳವಾಗಿದೆ.