alex Certify BIG NEWS: ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಹೇಳಿ ಟಿಎಂಸಿ ಸೇರ್ಪಡೆಯಾದ ಮಾಜಿ ಕೇಂದ್ರ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಹೇಳಿ ಟಿಎಂಸಿ ಸೇರ್ಪಡೆಯಾದ ಮಾಜಿ ಕೇಂದ್ರ ಸಚಿವ

Babul Supriyo with Derek O'Brien and Abhishek Banerjee on Saturday.

ಕೋಲ್ಕತ್ತಾ: ಇತ್ತೀಚೆಗಷ್ಟೇ ನಡೆದ ಕೇಂದ್ರ ಸಚಿವ ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ಕಳೆದುಕೊಂಡಿದ್ದ ಬಿಜೆಪಿ ನಾಯಕ ಬಬುಲ್ ಸುಪ್ರಿಯೋ, ತಾವು ರಾಜಕೀಯದಿಂದಲೇ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದಾಗಿ ಹೇಳಿದ್ದರು. ಆದರೀಗ ಅಚ್ಚರಿ ಬೆಳವಣಿಗೆಯಲ್ಲಿ ಸುಪ್ರಿಯೋ ತೃಣಮೂಲ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹಾಗೂ ರಾಜ್ಯಸಭಾ ಸದಸ್ಯ ಡೆರೆಕ್ ಒಬ್ರೆನ್ ಅವರ ಸಮ್ಮುಖದಲ್ಲಿ ಬಬುಲ್ ಸುಪ್ರಿಯೋ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು.

ದೇಶದಲ್ಲಿ ಕೋವಿಡ್​ ಲಸಿಕೆ ಅಭಾವ ತಪ್ಪಿಸಲು ಕೇಂದ್ರ ಸರ್ಕಾರದಿಂದ ಹೊಸ ಮಾಸ್ಟರ್​ ಪ್ಲಾನ್..​..!

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನಾರಚನೆ ವೇಳೆ ಹೈಕಮಾಂಡ್ ಸೂಚನೆ ಮೇರೆಗೆ ಸುಪ್ರಿಯೋ ಸೇರಿದಂತೆ 12 ಸಚಿವರು ರಾಜೀನಾಮೆ ನೀಡಿದ್ದರು. ರಾಜೀನಾಮೆ ಬಳಿಕ ಹೇಳಿಕೆ ನೀಡಿದ್ದ ಸುಪ್ರಿಯೋ ತಾವು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿ ರಾಜಕಾರಣದಿಂದಲೇ ದೂರ ಉಳಿಯಲು ತೀರ್ಮಾನಿಸಿದ್ದಾಗಿ ಘೋಷಿಸಿದ್ದರು. ಅಷ್ಟೇ ಅಲ್ಲ ಒಂದು ಕಾಲದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಕಟುವಾಗಿ ಟೀಕಿಸಿದ್ದ ಸುಪ್ರಿಯೋ ಇದೀಗ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...