alex Certify BREAKING NEWS: ಕಾರ್ ಅಪಘಾತದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾರ್ ಅಪಘಾತದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಾಯ

ಕಲಬುರಗಿ: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಕಲಬುರ್ಗಿಯ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ.

ಅಪಘಾತದಲ್ಲಿ ಬಾಬುರಾವ್ ಚಿಂಚನಸೂರ್ ಅವರ ಕಾಲು ಮತ್ತು ಮುಖಕ್ಕೆ ಗಾಯಗಳಾಗಿದ್ದು, ಚುಂಚನಸೂರ್ ಕಲಬುರ್ಗಿಯ ಯುನೈಟೆಡ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಕಾರ್ ಚಾಲಕ, ಗನ್ ಮ್ಯಾನ್ ಗೆ ಯಾವುದೇ ಅಪಾಯವಾಗಿಲ್ಲ.

ಗುರುಮಠಕಲ್ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಚಿಂಚನಸೂರ್ ಯಾದಗಿರಿಯಿಂದ ಕಲಬುರಗಿಗೆ ತೆರಳುವಾಗ ಕಾರ್ ಅಪಘಾತಕ್ಕೀಡಾಗಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದೆ. ಕಾರ್ ಚಾಲಕ ನಿದ್ದೆಯ ಮಂಪರಿನಲ್ಲಿದ್ದು, ಗುಂಡಿಗೆ ಇಳಿದ ಕಾರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...