alex Certify ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಶಾಸಕ ಚಿಂಚನಸೂರ್ ಬಿಜೆಪಿಗೆ ಗುಡ್ ಬೈ; ಇಂದು ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಶಾಸಕ ಚಿಂಚನಸೂರ್ ಬಿಜೆಪಿಗೆ ಗುಡ್ ಬೈ; ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಬಾಬುರಾವ್ ಚಿಂಚನಸೂರ್ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಮಧ್ಯಾಹ್ನ ಅವರು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ.

ಇಂದು ಬೆಳಿಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಅವರು ಪಕ್ಷ ಸೇರಲಿದ್ದಾರೆ. ಬಿಜೆಪಿ ವಿಧಾನಪರಿಷತ್ ಸದಸ್ಯರಾಗಿದ್ದ ಚಿಂಚನಸೂರ್ ಅವರು ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...