alex Certify ಮನೆಯಲ್ಲಿ ಆಟವಾಡುವಾಗಲೇ ನಡೆದಿದೆ ನಡೆಯಬಾರದ ಘಟನೆ, ನೀರಿನ ಬಕೆಟ್ ಗೆ ಬಿದ್ದು ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಆಟವಾಡುವಾಗಲೇ ನಡೆದಿದೆ ನಡೆಯಬಾರದ ಘಟನೆ, ನೀರಿನ ಬಕೆಟ್ ಗೆ ಬಿದ್ದು ಮಗು ಸಾವು

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನೀರು ತುಂಬಿದ ಬಕೆಟ್ ಗೆ ಬಿದ್ದು ಮಗು ಮೃತಪಟ್ಟ ಘಟನೆ ನಡೆದಿದೆ.

ಒಂದೂವರೆ ವರ್ಷದ ವಿಜಯ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಅಥಣಿ ತಾಲೂಕಿನ ತಾಂವಶಿ  ಸನದಿ ತೋಟದಲ್ಲಿರುವ ನಿಂಗಪ್ಪನವರ ಮಗು ವಿಜಯ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದೆ.

ತಂದೆ ಹೊಲದ ಕೆಲಸಕ್ಕೆ ಹೋಗಿದ್ದು, ಮಗುವನ್ನು ಆಟವಾಡಲು ಬಿಟ್ಟು ತಾಯಿ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಆಟವಾಡಿಕೊಂಡಿದ್ದ ಮಗು ಬಕೆಟ್ ನಲ್ಲಿ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಕೆಲಸ ಮುಗಿದ ಬಳಿಕ ಮಗು ಕಾಣಿಸದಿದ್ದಾಗ ಹುಡುಕಾಟ ನಡೆಸಿದ್ದಾರೆ. ಬಕೆಟ್ ನಲ್ಲಿ ಮಗು ಬಿದ್ದು ಮೃತಪಟ್ಟಿರುವುದು ಕಂಡುಬಂದಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...