ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್ ನಲ್ಲಿ ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಗಂಡು ಮಗು ಸಾವನ್ನಪ್ಪಿದೆ.
ಶಿವಾನಂದ ಮತ್ತು ಶಿಲ್ಪಾ ದಂಪತಿಯ ಪುತ್ರ ವಿಜಯೇಂದ್ರ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಮನೆಯ ಮುಂದೆ ಆಟವಾಡುವ ವೇಳೆ ಕಾಲುವೆಗೆ ಬಿದ್ದು ಮಗು ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.