
ರಾಮನಗರ: ಆಸ್ಪತ್ರೆಯಲ್ಲಿ ಇಂಜಕ್ಷನ್ ನೀಡಿದ ಒಂದು ಗಂಟೆಯಲ್ಲೇ ಒಂದುವರೆ ತಿಂಗಳ ಕಂದಮ್ಮ ಸಾವನ್ನಪ್ಪಿದ್ದು, ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ವ್ಯಾಕ್ಸಿನೇಷನ್ ಹಾಕಿಸಲಾಗಿತ್ತು. ಇಂಜಕ್ಷನ್ ಕೊಟ್ಟ ಒಂದು ಗಂಟೆಯಲ್ಲೇ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರೇ ಕಾರಣ ಎಂದು ಆಸ್ಪತ್ರೆ ಮುಂದೆ ಪೋಷಕರು, ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಒಂದುವರೆ ತಿಂಗಳ ಕಂದಮ್ಮನನ್ನು ಕಳೆದುಕೊಂಡಿರುವ ತಂದೆ-ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.