
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಹೊಟ್ಟೆಯಲ್ಲಿಯೇ ಮಗು ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ.
ಹೆರಿಗೆಗಾಗಿ ತಡರಾತ್ರಿ ಇಂದ್ರವ್ವ ಭೋವಿ ಆಸ್ಪತ್ರೆಗೆ ದಾಖಲಾಗಿದ್ದರು. ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ.
ಆಸ್ಪತ್ರೆಯ ಸಿಬ್ಬಂದಿ ತಪಾಸಣೆ ಮಾಡಿ ಅಡ್ಮಿಟ್ ಮಾಡಿಕೊಂಡಿದ್ದರು. ನಂತರ ತಡರಾತ್ರಿ ಹೆರಿಗೆಗೆ ಇನ್ನೂ ಸಮಯವಿದೆ ಎಂದು ಡಾ. ಶ್ರೀಶೈಲ್ ಹೇಳಿದ್ದರು. ಬೆಳಗ್ಗೆ ತಪಾಸಣೆಯ ನಂತರ ಹೊಟ್ಟೆಯಲ್ಲಿ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ. ವೈದ್ಯರ ನಿರ್ಲಕ್ಷದಿಂದ ಮಗು ಮೃತಪಟ್ಟಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.