
ಬೆಂಗಳೂರು: ರಸ್ತೆ ದಾಟುತ್ತಿದ್ದ ಮರಿಯಾನೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಆನೆ ರಸ್ತೆ ಪಕ್ಕದಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ-ಹಾರೋಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಕಾಡಿನ ಮಧ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಈ ಭಾಗದಲ್ಲಿ ವನ್ಯ ಜೀವಿಗಳಿವೆ ನಿಧಾನವಾಗಿ ಚಲಿಸಿ ಎಂದು ಸೂಚನಾ ಫಲಕಗಳನ್ನೂ ಹಾಕಲಾಗಿದೆ. ಆದಾಗ್ಯೂ ವೇಗವಾಗಿ ಬಂದ ವಾಹನವೊಂದು ಮರಿಯಾನೆಗೆ ಡಿಕ್ಕಿ ಹೊಡೆದಿದ್ದು, ಮರಿಯಾನೆ ನರಳಾಡಿ ರಸ್ತೆ ಬದಿಯೇ ಪ್ರಾಣಬಿಟ್ಟಿದೆ.
ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು, ಆನೇಕಲ್ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.