ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ.
ಮಂಡ್ಯ ಜಿಲ್ಲಾಪಂಚಾಯ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ತುರ್ತು ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿ ವರದಿ ನೀಡುವಂತೆ ಕೋರ್ಟ್ ತಿಳಿಸಿತ್ತು. ಆದರೆ ರೈತರು ಟ್ರಯಲ್ ಬ್ಲಾಸ್ಟ್ ಮಾಡದಂತೆ ವಿರೋಧ ವ್ಯಕ್ತಪಡಿಸಿದ್ದರು. ನಮಗೆ ಜಲಾಶಯದ ಸುರಕ್ಷತೆ ಮುಖ್ಯ ಹೊರತು ಬೇರಾವ ಉದ್ದೇಶ ಸರ್ಕಾರಕ್ಕೆ ಇಲ್ಲ. ಈಗಾಗಲೇ ಹಲವಾರು ರೈತರು ಭೇಟಿಯಾಗಿ ಟ್ರಯಲ್ ಬ್ಲಾಸ್ಟ್ ಮಾಡದಂತೆ ಮನವಿ ಮಾಡಿದ್ದಾರೆ. ಹಾಗಾಗಿ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ತಾತ್ಕಾಲಿಕ ತಡೆ ನೀಡಿ ಆದೇಶ ಹೊರಡಿಸಲಾಗಿದೆ.
ಅಡ್ವಕೆಟ್ ಜನರಲ್ ಜೊತೆ ಚರ್ಚಿಸಿ ಜುಲೈ 15ರೊಳಗೆ ಕೋರ್ಟ್ ಗೆ ಈ ಬಗ್ಗೆ ಮನವಿ ಸಲ್ಲಿಸುತ್ತೇವೆ. ಏನು ಮನವಿ ಮಾಡಬೇಕು ಎಂಬುದನ್ನು ಸರ್ಕಾರ ತೀರ್ಮಾನ ಮಾಡಲಿದೆ ಎಂದು ಹೇಳಿದರು.