ಕೋಲಾರ: ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಶಿಶು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಂತಾಮಣಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕು ಚಾಕವೇಲು ನಿವಾಸಿ 29 ವರ್ಷದ ಮಮತಾ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಆಸ್ಪತ್ರೆಯ ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿಂತಾಮಣಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿತ್ತು. ಶೌಚಾಲಯದ ಕಿಟಕಿಗೆ ಮಗುವನ್ನು ನೇತುಹಾಕಿ ಕೊಲೆ ಮಾಡಲಾಗಿದ್ದು, ಸ್ವಚ್ಛತೆಗೆ ಬಂದಿದ್ದ ಸಿಬ್ಬಂದಿ ಮಗುವನ್ನು ಕಂಡಿದ್ದಾರೆ. ಕೂಡಲೇ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದರೂ, ಈ ವೇಳೆಗಾಗಲೇ ಶಿಶು ಮೃತಪಟ್ಟಿತ್ತು. ಮಗುವನ್ನು ಕೊಂದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.