alex Certify ಸದ್ಯಕ್ಕೆ ಮಗು ಬೇಡ ಎಂದ ಪತ್ನಿ: ಕತ್ತು ಹಿಸುಕಿ ಕೊಂದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸದ್ಯಕ್ಕೆ ಮಗು ಬೇಡ ಎಂದ ಪತ್ನಿ: ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿ ಪತಿಯೇ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಭಟ್ಕಳ ನಿವಾಸಿ ಗಿರಿಜಾ(30) ಕೊಲೆಯಾದವರು. ಆರೋಪಿ ನವೀನ್ ಕುಮಾರ್(31) ನನ್ನು ಪೊಲೀಸರು ಬಂಧಿಸಿದ್ದಾರೆ. ಎಂಟು ತಿಂಗಳ ಹಿಂದೆ ಗಿರಿಜಾ –ನವೀನ್ ಕುಮಾರ್ ಮದುವೆಯಾಗಿದ್ದು, ಇತ್ತೀಚೆಗೆ ಗಿರಿಜಾ ಅವರಿಗೆ ಗರ್ಭಪಾತವಾಗಿತ್ತು. ಮಗು ವಿಚಾರಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು. ಶುಕ್ರವಾರ ರಾತ್ರಿ ಮತ್ತೆ ಇದೇ ವಿಚಾರವಾಗಿ ಜಗಳವಾಗಿದ್ದು, ಸದ್ಯಕ್ಕೆ ಮಗು ಬೇಡ ಎಂದು ಗಿರಿಜಾ ಹೇಳಿದ್ದಾರೆ. ಇದರಿಂದ ಕೋಪಗೊಂಡ ನವೀನ್ ಪತ್ನಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಹೆಚ್ಎಎಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...