ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ ನಡೆಯುವಾಗ ಮೂರು ವರ್ಷದ ಮಗು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.
ಎದೆ ಮೇಲೆ ಕಾಲಿಟ್ಟು ಶ್ರೀನಿಧಿ ಕಾಳಾ ಪಾಟೀಲ್(3)ನನ್ನು ಹತ್ಯೆ ಮಾಡಲಾಗಿದೆ. ಹಣಕಾಸಿನ ವಿಚಾರಕ್ಕೆ ನಡೆದ ಜಗಳದ ವೇಳೆ ಜ್ಯೋತಿಬಾ ಬಾಬರ್ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.