
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಸಮೀಪದ ಬಿ.ಜಿ. ಕೆರೆಯಲ್ಲಿ ಖಾಸಗಿ ಬಸ್ ನಲ್ಲೇ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.
ಬೆಂಗಳೂರಿನಿಂದ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆ ಅರಿಕೆರೆ ಗ್ರಾಮಕ್ಕೆ ತೆರಳುತ್ತಿದ್ದ 25 ವರ್ಷದ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಗರ್ಭಿಣಿಯಾಗಿದ್ದ ಅವರು ಹೆರಿಗೆಗಾಗಿ ತವರು ಮನೆಗೆ ತಂದೆಯೊಂದಿಗೆ ಖಾಸಗಿ ಬಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೆಳಗಿನ ಜಾವ ಬಸ್ ನಲ್ಲೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಸುರಕ್ಷಿತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.