ಉಡುಪಿ: ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಉಡುಪಿಯ ತಾಯಿ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳು ಜನಿಸಿವೆ.
ಉತ್ತರ ಕನ್ನಡ ಜಿಲ್ಲೆ ಅಂಕೋಲಾದ ಸಿದ್ದಿ ಜನಾಂಗದ 27 ವರ್ಷದ ಸುನಿತಾ ಅವರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿದೆ. ತಾಯಿ ಮಕ್ಕಳು ಆರೋಗ್ಯವಾಗಿದ್ದು, ವಾರದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್ ಮಾಹಿತಿ ನೀಡಿದ್ದಾರೆ.