ಮಂಗಳೂರು: ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಡಿಸೆಂಬರ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಸೋಮವಾರ ಹೊರಡಿಸಿದ ಫೆಂಗಲ್ ಚಂಡಮಾರುತದಿಂದಾಗಿ ಭಾರಿ ಮಳೆ ಮುನ್ಸೂಚನೆ ಮತ್ತು ಆರೆಂಜ್ ಅಲರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.
ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12 ನೇ ತರಗತಿಯವರೆಗೆ) ಡಿಸೆಂಬರ್ 3 ರ ಮಂಗಳವಾರ ಮುಚ್ಚಲ್ಪಡುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.