alex Certify Congress Guarantee : ‘ಗ್ಯಾರಂಟಿ ಯೋಜನೆ’ ಜಾರಿ ಹಿನ್ನೆಲೆ ಹೆಚ್ಚು ಅನುದಾನ ನೀಡಲಾಗುತ್ತಿಲ್ಲ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Congress Guarantee : ‘ಗ್ಯಾರಂಟಿ ಯೋಜನೆ’ ಜಾರಿ ಹಿನ್ನೆಲೆ ಹೆಚ್ಚು ಅನುದಾನ ನೀಡಲಾಗುತ್ತಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಗ್ಯಾರಂಟಿ ಯೋಜನೆ ಜಾರಿ’ ಹಿನ್ನೆಲೆ ಹೆಚ್ಚು ಅನುದಾನ ನೀಡಲಾಗುತ್ತಿಲ್ಲ, ಎಲ್ಲಾ ಶಾಸಕರು ಸಹಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಬಜೆಟ್ ಗೂ ಮುನ್ನ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ್ದಾರೆ. ಗ್ಯಾರಂಟಿ ಜಾರಿ ಹಿನ್ನೆಲೆ ಶಾಸಕರಿಗೆ ನೂರಾರು ಕೋಟಿ ಅನುದಾನ ನೀಡುವುದು ಕಷ್ಟವಾಗುತ್ತದೆ, ಮುಂದಿನ 8 ತಿಂಗಳಿನವರೆಗೆ ಸಹಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
ಗ್ಯಾರಂಟಿ ಯೋಜನೆಗಳೇ ನಮಗೆ ಆಕ್ಸಿಜನ್, ಲೋಕಸಭಾ ಚುನಾವಣೆ ಬರುವವರೆಗೆ ಜನರ ಮನಸ್ಸು ಮುಟ್ಟುವಂತೆ ಅದನ್ನು ಪ್ರಚಾರ ಮಾಡಿ, ಅದೇ ನಿಮ್ಮ ಕೈ ಹಿಡಿಯುತ್ತದೆ ಎಂದು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದು, ಬಜೆಟ್ ಗೂ ಮುನ್ನ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆದಿದೆ ಸದನದಲ್ಲಿ ಹೇಗೆ ಇರಬೇಕು, ಹೇಗೆ ಮಾತನಾಡಬೇಕು ಎಂದು ಒಗ್ಗಟ್ಟು ಪ್ರದರ್ಶಿಸುವಂತೆ ಶಾಸಕರಿಗೆ ಸಿಎಂ ಸೂಚನೆ ನೀಡಿದ್ದಾರೆ. ಬಜೆಟ್ ಹಾಗೂ ಸದನದಲ್ಲಿ ಹೇಗೆಲ್ಲ ಮಾತನಾಡಬೇಕು ಎನ್ನುವುದರ ಬಗ್ಗೆ ಶಾಸಕರು, ಸಚಿವರಿಗೆ ಸಿಎಂ ಸಲಹೆ ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು 14 ನೇ ಬಾರಿಗೆ ರಾಜ್ಯ ಸರ್ಕಾರದ ಆಯವ್ಯಯ ಮಂಡಿಸಿ ದಾಖಲೆ ನಿರ್ಮಿಸುತ್ತಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ದೂರ ದೃಷ್ಟಿ ಆಲೋಚನೆಗಳನ್ನು ಕ್ರೂಢೀಕರಿಸಿ ಮಹತ್ವದ ಬಜೆಟ್ ಮಂಡನೆ ಮಾಡಲಿದ್ದು, ರಾಜ್ಯದ ಜನರ ಚಿತ್ತ ಸಿಎಂ ಸಿದ್ದರಾಮಯ್ಯರತ್ತ ನೆಟ್ಟಿದೆ. ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದ್ದು, ಕೊಟ್ಟ ಭರವಸೆಯಂತೆ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...