
ಬೆಂಗಳೂರು: ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳಿಗೆ ಮೂರು ತಿಂಗಳಲ್ಲಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಂಪುಟ ಉಪ ಸಮಿತಿ ಸೂಚನೆ ನೀಡಿದೆ.
ಸಚಿವರಾದ ಸಂಪುಟ ಉಪಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಇಲಾಖೆಗಳು, ನಿಗಮಗಳು, ವಿಶ್ವವಿದ್ಯಾಲಯವಾರು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳನ್ನು ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಸರ್ಕಾರಿ, ಅನುದಾನಿತ ಕಾಲೇಜು ತಾಂತ್ರಿಕ ಕಾಲೇಜು ಹಾಗೂ ವಿವಿಧ ವಿವಿಗಳಲ್ಲಿ ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ 882 ಹುದ್ದೆಗಳು ಬಾಕಿ ಇವೆ. ಈ ಹುದ್ದೆಗಳ ನೇಮಕಾತಿಗೆ ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.