alex Certify ಬ್ಯಾಕ್ ಲಾಗ್ ಹುದ್ದೆ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಕ್ ಲಾಗ್ ಹುದ್ದೆ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ

ಬೆಂಗಳೂರು: ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳಿಗೆ ಮೂರು ತಿಂಗಳಲ್ಲಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಂಪುಟ ಉಪ ಸಮಿತಿ ಸೂಚನೆ ನೀಡಿದೆ.

ಸಚಿವರಾದ ಸಂಪುಟ ಉಪಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

ಇಲಾಖೆಗಳು, ನಿಗಮಗಳು, ವಿಶ್ವವಿದ್ಯಾಲಯವಾರು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳನ್ನು ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಸರ್ಕಾರಿ, ಅನುದಾನಿತ ಕಾಲೇಜು ತಾಂತ್ರಿಕ ಕಾಲೇಜು ಹಾಗೂ ವಿವಿಧ ವಿವಿಗಳಲ್ಲಿ ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ 882 ಹುದ್ದೆಗಳು ಬಾಕಿ ಇವೆ. ಈ ಹುದ್ದೆಗಳ ನೇಮಕಾತಿಗೆ ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...