ಬೆಳಗಾವಿ(ಸುವರ್ಣಸೌಧ): ಅರ್ಹ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಅನುಸಾರ ವಿದ್ಯಾರ್ಥಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ಶಾಸಕ ಹೆಚ್.ಡಿ. ತಮ್ಮಯ್ಯ ಅವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು, 2023-24ನೇ ಸಾಲಿಗೆ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಕೇಂದ್ರದ ಪಾಲಿನ 40 ಕೋಟಿ ರೂ., ರಾಜ್ಯದ ಪಾಲಿನ 65 ಕೋಟಿ ರೂ. ಸೇರಿ 105 ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ನಿಗದಿಪಡಿಸಲಾಗಿದೆ ಎಂದರು.
ಮಾರ್ಗಸೂಚಿ ಅನುಸಾರ ವಿದ್ಯಾರ್ಥಿ ವೇತನ ಪಾವತಿಸಲಾಗುವುದು. 2023- 24ನೇ ಸಾಲಿನಲ್ಲಿ ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ ಅರ್ಹ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಾವತಿಸಲಾಗುತ್ತಿದೆ ಎಂದು ಹೇಳಿದ್ದಾರೆ.