ಬಾಗಲಕೋಟೆ: ಕೆರೂರಿನಲ್ಲಿ ಗುಂಪು ಘರ್ಷಣೆ ಖಂಡಿಸಿ ಬಾದಾಮಿ ಬಂದ್ ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳಿಂದ ಇಂದು ಬಾದಾಮಿ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.
ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡುವಂತೆ ಶ್ರೀರಾಮಸೇನೆ, ವಿಶ್ವ ಹಿಂದೂ ಪರಿಷತ್, ದಲಿತ ಸಂಘಟನೆಗಳು, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಕರೆ ನೀಡಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಮಾಲೀಕರಿಗೆ ಮನವಿ ಮಾಡಲಾಗಿದೆ.
ಕೆರೂರು ಮಾರುಕಟ್ಟೆಯಲ್ಲಿ ಘರ್ಷಣೆ ಉಂಟಾಗಿ ಇಬ್ಬರು ಗಾಯಗೊಂಡಿದ್ದು, ತಳ್ಳುವ ಗಾಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಪೊಲೀಸರು ತಕ್ಷಣಕ್ಕೆ ಕ್ರಮಕೈಗೊಂಡು ಪರಿಸ್ಥಿತಿ ನಿಯಂತ್ರಿಸಿದ್ದರು. ಕೆರೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೆರೂರು ಪಟ್ಟಣದಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ಕೂಡ ರಜೆ ನೀಡಲಾಗಿದೆ. ಬಾಗಲಕೋಟೆ ಜಿಲ್ಲಾಡಳಿತ ಇಂದು ರಜೆ ವಿಸ್ತರಿಸಿದ್ದು, ನಿಷೇಧಾಜ್ಞೆ ಕೂಡ ವಿಸ್ತರಿಸಲಾಗಿದೆ. ಪ್ರಕ್ಷುಬ್ಧ ವಾತಾವರಣ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.