ಬೆಂಗಳೂರು: ಬಾದಾಮಿ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಒತ್ತಾಯಿಸಲು ನೂರಾರು ವಾಹನಗಳಲ್ಲಿ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ.
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ವಿವಿಧೆಡೆಯಿಂದ ನೂರಾರು ವಾಹನಗಳಲ್ಲಿ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದು, ಇಂದು ಬೆಂಗಳೂರಿನ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಒತ್ತಡ ಹಾಕಲಿದ್ದಾರೆ.
ಬಾದಾಮಿಯಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಒಪ್ಪದಿದ್ದರೆ ಮನೆಯ ಎದುರು ಧರಣಿ ನಡೆಸಲು ತೀರ್ಮಾನಿಸಿದ್ದಾರೆ. ಬಾದಾಮಿ ಕ್ಷೇತ್ರವನ್ನು ಸಿದ್ದರಾಮಯ್ಯ ಸಾಕಷ್ಟು ಅಭಿವೃದ್ಧಿ ಪಡಿಸಿದ್ದಾರೆ. ಮತ್ತೊಮ್ಮೆ ಅವರು ಬಾದಾಮಿಯಿಂದ ಸ್ಪರ್ಧಿಸಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ.