alex Certify ಕೋಲಾರದಲ್ಲಿ ಸ್ಪರ್ಧೆಗೆ ಮುಂದಾದ ಸಿದ್ಧರಾಮಯ್ಯರಿಗೆ ಬಾದಾಮಿಯಿಂದಲೇ ಸ್ಪರ್ಧೆಗೆ ಒತ್ತಡ: ನೂರಾರು ವಾಹನಗಳಲ್ಲಿ ಭೇಟಿಗೆ ಬೆಂಗಳೂರಿಗೆ ಬಂದ ಅಭಿಮಾನಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಲಾರದಲ್ಲಿ ಸ್ಪರ್ಧೆಗೆ ಮುಂದಾದ ಸಿದ್ಧರಾಮಯ್ಯರಿಗೆ ಬಾದಾಮಿಯಿಂದಲೇ ಸ್ಪರ್ಧೆಗೆ ಒತ್ತಡ: ನೂರಾರು ವಾಹನಗಳಲ್ಲಿ ಭೇಟಿಗೆ ಬೆಂಗಳೂರಿಗೆ ಬಂದ ಅಭಿಮಾನಿಗಳು

ಬೆಂಗಳೂರು: ಬಾದಾಮಿ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧಿಸುವಂತೆ ಒತ್ತಾಯಿಸಲು ನೂರಾರು ವಾಹನಗಳಲ್ಲಿ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ವಿವಿಧೆಡೆಯಿಂದ ನೂರಾರು ವಾಹನಗಳಲ್ಲಿ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದು, ಇಂದು ಬೆಂಗಳೂರಿನ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಒತ್ತಡ ಹಾಕಲಿದ್ದಾರೆ.

ಬಾದಾಮಿಯಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಒಪ್ಪದಿದ್ದರೆ ಮನೆಯ ಎದುರು ಧರಣಿ ನಡೆಸಲು ತೀರ್ಮಾನಿಸಿದ್ದಾರೆ. ಬಾದಾಮಿ ಕ್ಷೇತ್ರವನ್ನು ಸಿದ್ದರಾಮಯ್ಯ ಸಾಕಷ್ಟು ಅಭಿವೃದ್ಧಿ ಪಡಿಸಿದ್ದಾರೆ. ಮತ್ತೊಮ್ಮೆ ಅವರು ಬಾದಾಮಿಯಿಂದ ಸ್ಪರ್ಧಿಸಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...