ಲಖನೌ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನನ್ನು ಬಂಧಿಸಲಾಗಿದೆ.
ಪೊಲೀಸರ ಪ್ರಕಾರ, ಆರೋಪಿ ಸೈಯದ್ ವಾಸಿಕ್ ಅಲಿ ಎಂದು ಗುರುತಿಸಲಾಗಿದ್ದು, ಶುಕ್ರವಾರ ಮನೆಗೆ ಬೋಧಿಸಲು ಬಂದಾಗ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ರಾಮ್‌ಪುರ ಕೊತ್ವಾಲಿಯ ಕುಂದಾ ನಿವಾಸಿ ಸೈಯದ್ ಅಲಿಯನ್ನು ಬಂಧಿಸಲಾಗಿದೆ.
ಅಪ್ರಾಪ್ತೆ ಕುಟುಂಬವು ಗಂಜ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೊ ಕಾಯ್ದೆಯಡಿ ಆತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಬಾಲಕಿಗೆ ಬೋಧನೆ ಮಾಡಲು ಮನೆಗೆ ಬಂದಾಗ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಕುಟುಂಬದವರು ದೂರಿನಲ್ಲಿ ಆರೋಪಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ರಾಂಪುರ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ವಿದ್ಯಾಸಾಗರ್ ಮಿಶ್ರಾ ತಿಳಿಸಿದ್ದಾರೆ.