![](https://kannadadunia.com/wp-content/uploads/2019/08/car-accident-generic-unsplash-650_625x300_24_January_19.jpg)
ಬಾಗಲಕೋಟೆ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಕ್ಕಸಗಿ ಬಳಿ ಅಪಘಾತ ಸಂಭವಿಸಿದೆ.
ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್(39), ಶಾಂತವ ಕಟ್ಟಿಮನೆ(43), ಮಾಂತವ್ವ(75) ಮೃತಪಟ್ಟವರು ಎಂದು ಹೇಳಲಾಗಿದೆ. ಅಮೀನಗಡ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.