ಬಾಗಲಕೋಟೆ: ಕೇಂದ್ರ ಗೃಹ ಸಚಿವ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು ಇಂದು ಬಾಗಲಕೋಟೆ ನಗರ ಬಂದ್ ಗೆ ಕರೆ ನೀಡಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಬಂದ್ ಹಿನ್ನೆಲೆಯಲ್ಲಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಲ್ಲಿಯೂ ಬಸ್ ಸಂಚಾರ ಸ್ಥಗಿತಗೊಂಡಿದೆ. ಹೊರ ಊರುಗಳಿಂದ ಬರುವ ಬಸ್ ಗಳು ಬಸ್ ನಿಲ್ದಾಣದತ್ತ ಸುಳಿದಿಲ್ಲ. ಬಾಗಲಕೋಟೆ ನಗರದಾದ್ಯಂತ ಅಂಗಡಿಗಳು, ಮಳಿಗೆಗಳು ಬಂದ್ ಆಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
ರಸ್ತೆಗಳಲ್ಲಿ ಜನ ಸಂಚಾರವಿಲ್ಲದೇ ಬಿಕೋ ಎನ್ನುತ್ತಿವೆ. ಬಾಗಲಕೋಟೆ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ