
ಬಾಗಲಕೋಟೆ: ಶೆಡ್ ಗೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ-ಮಗಳು ಇಬ್ಬರು ಸಜೀವದಹನವಾಗಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಈ ಪ್ರಕರಣದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ.
ಘಟನೆಯಲ್ಲಿ ಸುಟ್ಟಗಾಯಗಳಿಂದ ಗಂಭೀರವಾಗಿದ್ದ ಮತ್ತೋರ್ವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಜುಲೈ 16ರಂದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ರಾತ್ರಿ ಬೆಳ್ಗಾಗುವಷ್ಟರಲ್ಲಿ ದುಷ್ಕರ್ಮಿಗಳು ಶೆಡ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಶೆಡ್ ನಲ್ಲಿದ್ದ ತಾಯಿ-ಮಗಳು ಸುಟ್ಟು ಕರಕಲಾಗಿದ್ದರು. ಮೂವರು ಗಂಭೀರವಗೈ ಗಾಯಗೊಂಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಮಗ ಸುಬಾನ್ ಪೆಂಡಾರಿ(27)ಯನ್ನು ಬೆಳಗಾವಿ ಕೆ ಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾನೆ. ಈ ಮೂಲಕ ಶೆಡ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ. ಇನ್ನು ಗಾಯಾಳು ದಸ್ತಗಿರಿಸಾಬ್, ಮೊಮ್ಮಗ ಸುಸಿದ್ದಿಕ್ ಗೆ ಚಿಕಿತ್ಸೆ ಮುಂದುವರೆದಿದೆ.