
ಬಾಗಲಕೋಟೆ: ಶಾಲೆಯ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದಲ್ಲಿ ಕೋಲೂರು ಪ್ರೌಢ ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತು ಮಡಿ ಆದೇಶ ಹೊರಡಿಸಲಾಗಿದೆ.
ಡಿ.ಹೆಚ್.ಅಂಗಡಿ ಸಸ್ಪೆಂಡ್ ಆದ ಶಿಕ್ಷಕ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕೋಲುರು ಪ್ರೌಢ ಶಾಲೆಯ ಮುಖ್ಯಶಿಕ್ಷಕರಾಗಿದ್ದ ಡಿ.ಹೆಚ್.ಅಂಗಡಿ ವಿರುದ್ಧ ಅಟಲ್ ಟಿಂಕರಿಂಗ್ ಲ್ಯಾಬ್ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿತ್ತು.
ಅಷ್ಟೇ ಅಲ್ಲ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನೀಡಲು 100 ರೂಪಾಯಿಯಂತೆ ವಸೂಲಿ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ಕೊಡಲು 100 ರೂಪಾಯಿ ಹಣ ಪಡೆಯುತ್ತಿದ್ದರು. ಮುಖ್ಯ ಶಿಕ್ಷಕರ ಭ್ರಷ್ಟಾಚಾರ ಬಯಲಿಗೆ ಬರುತ್ತಿದ್ದಂತೆ ಧಾರವಡದ ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತರು ಡಿ.ಹೆಚ್.ಅಂಗಡಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.