ಬಾಗಲಕೋಟೆ: ವಾಲ್ಮೀಕಿ ನಿಗಮದ ಹಗರಣದ ರೀತಿಯಲ್ಲಿಯೇ ಬಾಗಲಕೋಟೆಯಲ್ಲಿಯೂ ಅಕ್ರಮ ಹಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರವಾಸೋದ್ಯಮ ಇಲಾಖೆಯ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ.
ಇಲಾಖೆಯ 2,47,73,999 ರೂ ಹಣವನ್ನು ಐಡಿಬಿಐ ಬ್ಯಾಂಕ್ ಖಾತೆಯ ಮೂಲಕ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದ್ದು, ಬಾಗಲಕೋಟೆ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರವಾಸೋದ್ಯಮ ಖಾತೆಯ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಐಡಿಬಿಐ ಬ್ಯಾಂಕ್ ನ ಮ್ಯಾನೇಜರ್ ಹಾಗೂ ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಗೋಪಾಲ ಹಿತ್ತಲಮನಿ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
28/10/2021ರಿಂದ 22/2/2023ರವರೆಗೆ ಡಿಸಿ, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅದ್ಯಕ್ಷರ ಹೆಸರಲ್ಲಿ ಐಡಿಬಿಐ ಬ್ಯಾಂಕ್ ಖಾತೆ ಮೂಲಕ ವಂಚನೆ ಮಾಡಲಾಗಿದೆ. ಬ್ಯಾಂಕ್ ನಲ್ಲಿ ಖಾತೆ ತೆರೆದು ಮೂರು ಅಕೌಂಟ್ ನಂಬರ್ ಗಳಿಂದ ವಿವಿಧ ಅಕೌಂಟ್ ಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.