alex Certify ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು

ಬಾಗಲಕೋಟೆ ಜಿಲ್ಲೆ ಹುನಗುಂದ ಬೇವಿನಹಟ್ಟಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಂದ್ರಶೇಖರ(22), ನವೀನ್(20), ಚನ್ನಬಸವ(22), ಬಸವರಾಜ(33) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಳಕಲ್ ಗುಳೇದಗುಡ್ಡಕ್ಕೆ ತೆರಳಿದ್ದ ಇವರು ಹುನಗುಂದಕ್ಕೆ ವಾಪಸಾಗುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಕಾರ್ ಚಾಲಕ ವಿಜಯಕುಮಾರ್ ಗಾಯಗೊಂಡಿದ್ದು, ಅವರನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...