ಬಾಗಲಕೋಟೆ: ಘಟಪ್ರಭಾ ಕಾಲುವೆಗೆ ಕಾರ್ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಹಲಕಿಕೆ ಗ್ರಾಮದ ಬಳಿ ತಡರಾತ್ರಿ ಅಪಘಾತ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಮಹದೇವಗೌಡ(27), ಏರಿತಾತ(26), ವಿಜಯ್(2)6 ಹಾಗೂ ಸುನಿಲ್(24) ಮೃತಪಟ್ಟವರು ಎಂದು ಹೇಳಲಾಗಿದೆ.
ಕಾರ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಧೋಳದಿಂದ ರಾಮದುರ್ಗಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಲ್ಲಿಗೆ ಡಿಕ್ಕಿ ಹೊಡೆದ ಕಾರ್ ನಿಯಂತ್ರಣ ತಪ್ಪಿ ಕಾಲುವೆಗೆ ಪಲ್ಟಿಯಾಗಿದೆ. ಸ್ಥಳಕ್ಕೆ ಲೋಕಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.