alex Certify ACCIDENT: ರಸ್ತೆಯಲ್ಲಿದ್ದ ಕಲ್ಲಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್, ನಾಲ್ವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ACCIDENT: ರಸ್ತೆಯಲ್ಲಿದ್ದ ಕಲ್ಲಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್, ನಾಲ್ವರ ಸಾವು

ಬಾಗಲಕೋಟೆ: ಘಟಪ್ರಭಾ ಕಾಲುವೆಗೆ ಕಾರ್ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಹಲಕಿಕೆ ಗ್ರಾಮದ ಬಳಿ ತಡರಾತ್ರಿ ಅಪಘಾತ ಸಂಭವಿಸಿದೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಮಹದೇವಗೌಡ(27), ಏರಿತಾತ(26), ವಿಜಯ್(2)6 ಹಾಗೂ ಸುನಿಲ್(24) ಮೃತಪಟ್ಟವರು ಎಂದು ಹೇಳಲಾಗಿದೆ.

ಕಾರ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಧೋಳದಿಂದ ರಾಮದುರ್ಗಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಲ್ಲಿಗೆ ಡಿಕ್ಕಿ ಹೊಡೆದ ಕಾರ್ ನಿಯಂತ್ರಣ ತಪ್ಪಿ ಕಾಲುವೆಗೆ ಪಲ್ಟಿಯಾಗಿದೆ. ಸ್ಥಳಕ್ಕೆ ಲೋಕಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...