alex Certify ಪುಂಡರ ಅಟ್ಟಹಾಸ: ಚಿನ್ನಾಭರಣ ಅಂಗಡಿಯಿಂದ ಹೊರಗೆಳೆದು ಸೋದರರ ಮೇಲೆ ತೀವ್ರ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುಂಡರ ಅಟ್ಟಹಾಸ: ಚಿನ್ನಾಭರಣ ಅಂಗಡಿಯಿಂದ ಹೊರಗೆಳೆದು ಸೋದರರ ಮೇಲೆ ತೀವ್ರ ಹಲ್ಲೆ

ಬಾಗಲಕೋಟೆ: ಕಾರ್ ಅನ್ನು ರಸ್ತೆ ಪಕ್ಕ ನಿಲ್ಲಿಸುವಂತೆ ಹೇಳಿದ್ದಕ್ಕೆ ಸಹೋದರರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ.

ಚಿನ್ನಾಭರಣ ಅಂಗಡಿ ನಡೆಸುತ್ತಿರುವ ಸಹೋದರರಾದ ಆನಂದ ರೇವಣಕಲ್, ಪ್ರಶಾಂತ ರೇವಣಕಲ್ ಅವರ ಮೇಲೆ ಹಲ್ಲೆ ಮಾಡಲಾಗಿದೆ.

ಕಾರ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಚಿನ್ನಾಭರಣ ಮಳಿಗೆಗೆ ನುಗ್ಗಿ ಹೊರಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಲಾಗಿದೆ. ಸಹೋದರರ ತಲೆ, ತುಟಿಯಿಂದ ರಕ್ತ ಬರುವಂತೆ ಹಲ್ಲೆ ನಡೆಸಲಾಗಿದೆ. ನಿಜಾಮ್, ಅಶ್ಫಾಕ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಹೋದರರು ಮನೆಗೆ ಮರಳಿದ್ದಾರೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...