alex Certify ಅನಾಹುತಕ್ಕೆ ಕಾರಣವಾಯ್ತು ಸಂಬಂಧಿಯೊಂದಿಗಿನ ಅಕ್ರಮ ಸಂಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಾಹುತಕ್ಕೆ ಕಾರಣವಾಯ್ತು ಸಂಬಂಧಿಯೊಂದಿಗಿನ ಅಕ್ರಮ ಸಂಬಂಧ

ಬಾಗಲಕೋಟೆ ಜಿಲ್ಲೆ ನರೇನೂರ ಗ್ರಾಮದಲ್ಲಿ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಸಂಬಂಧಿಕರು ಕೊಲೆ ಮಾಡಿದ ಆರೋಪ ಕೇಳಿಬಂದಿದೆ.

45 ವರ್ಷದ ಲಕ್ಷ್ಮಣ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅಕ್ರಮ ಸಂಬಂಧ ಹೊಂದಿದ್ದ ಆತನ ಮೇಲೆ ಹಲ್ಲೆ ಮಾಡಲಾಗಿದ್ದು, ಕೆರೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮಣ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಅಕ್ರಮ ಸಂಬಂಧದ ವಿಚಾರಕ್ಕೆ ಸಂಬಂಧಿಕರು ಬುದ್ಧಿವಾದ ಹೇಳಿದರೂ ಕೇಳದೆ ತನ್ನ ಚಾಳಿ ಮುಂದುವರಿಸಿದ್ದ ಹಿನ್ನೆಲೆಯಲ್ಲಿ ತೀವ್ರವಾಗಿ ಹಲ್ಲೆ ಮಾಡಿದ್ದರಿಂದ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಕೆರೂರು ಠಾಣೆ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...